ಬ್ಯಾಸರಾದಿತು ಹೇಸಿ ಕವಿ

ಬ್ಯಾಸರಾದಿತೊ ಹೇಸಿ ಕವಿ ಹಾಡುವದೈಸುರವೋ    ||ಪ||

ದೇಶ ತಿರುಗಿ ನೀ ತಂದ ರಿವಾಯತ
ಆಸರದೊಳು ಹಾಳ ಹರಟಿ                     ||೧||

ತಾಳವಿಲ್ಲದ ಮ್ಯಾಳ ಕಟ್ಟಿ ಫಲವೇನು
ತ್ವಾಳಹೋಗಿ ಹುಲಿನುಂಗಿ ನೀರಾಟದಿ
ಲೋಲ್ಯಾಡುವ ಹಾಳ ಹರಟಿ                    ||೨||

ದೇಶನುಂಗಿತೋ ಭೂಮಿನುಂಗಿತೋ
ಅಂಬರದಿ ವಾಸವಾಗಿಹೋಯ್ತೋ ಈ
ವಸುಧೆಗೆ ಶಿಶುನಾಳಧೀಶನ ಆಸರದೊಳು ಹಾಳ ಹರಟಿ ||೩ ||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆ ದಿನಗಳ ಹುಡುಗಿ
Next post ಅನಂತಮೂರ್ತಿಯವರ `ಭವ`

ಸಣ್ಣ ಕತೆ

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…