ಬೋಕಿ ಒಳಗ ಮೂರು ಲೋಕ ಹುಟ್ಟಿತು

ಬೋಕಿ ಒಳಗ ಮೂರು ಲೋಕ ಹುಟ್ಟಿತು
ಆ ಕುಲ ಈ ಕುಲ ಎಲ್ಲಿತ್ತೋ || ಪ ||

ಜೋಕಿಲೆ ಹದಿನೆಂಟು ಚಾತಿಗೆ ಹೇಳತೇನಿ
ಏಕಮುಂಡಗಿ ಮಾತಿದು ಗೊತ್ತೋ || ಆ. ಪ. ||

ಬಲ್ಲವರಾದರೆ ತಿಳಿದು ಹೇಳರಿ
ಮುಲ್ಲಾನ ಮಸೀದಿ ಎಲ್ಲಿತ್ತೋ
ಗುಲ್ಲಮಾಡಿ ಗುದ್ದ್ಯಾಟದಲಾವಿಗೆ
ಬೆಲ್ಲ ಓದಿಸುವದು ಎಲ್ಲಿತ್ತೋ   ||೧||

ಫಕ್ಕೀರರಾಗಿ ಪಾಪ ರಿವಾಯತು
ವಿಕಾರಿ ಕಲಿ ಕರ್ಮದ ಗೊತ್ತು
ಠಿಕಾಣಿಗಿದು ಶಿಶುನಾಳಧೀಶನಿಗೆ
ಸವ್ವಾಲಿಗುತ್ತರ ಹೆಚ್ಚಿತ್ತೋ    ||೨||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕ್ರಿಮಿನಲ್ ಹೆಣ್ಣು
Next post ನಗೆ ಡಂಗುರ – ೪೭

ಸಣ್ಣ ಕತೆ

 • ಪ್ರೇಮನಗರಿಯಲ್ಲಿ ಮದುವೆ

  ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

 • ಬಲಿ

  ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

 • ಕರಿ ನಾಗರಗಳು

  ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

 • ಕ್ಷಮೆ

  ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

 • ತಿಥಿ

  "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…