ಖರ್ಬೂಜದ ಗಾಡಿ

ಎಲ್ಲವನ್ನೂ ಮರೆತುಬಿಡಬಹುದು
ಆದರೆ ಮರೆಯುವುದು ಹೇಗೆ
ಖರ್ಬೂಜದ ಹಣ್ಣುಗಳನ್ನು ಹೇರಿಕೊಂಡು
ಬೀದಿಯ ತಿರುವಿನಲ್ಲಿ ಮರೆಯಾದ
ಎತ್ತಿನ ಗಾಡಿಯನ್ನು?

ನಮ್ಮ ಅನೇಕ ನೆನಪುಗಳ
ಕನಸುಗಳ ಗಾಡಿ
ಜನನಿಬಿಡ ಬೀದಿಯಲ್ಲಿ
ನಾವೆಲ್ಲರೂ ನೊಡುತ್ತಿದ್ದಂತೆಯೇ
ಕಾಣಿಸದಾಯಿತಲ್ಲ!-
ಎಲ್ಲಿಂದ ಬಂತು
ಎಲ್ಲಿಗೆ ಹೋಯಿತು-
ಒಂದೂ ತಿಳಿಯದಷ್ಟು ಬೇಗ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೈ ಝುಮ್ಮಾಗುವ ಸುಳ್ಳು
Next post ಒಮ್ಮೊಮ್ಮೆ ಹೀಗೂ ಆಗುವುದು

ಸಣ್ಣ ಕತೆ

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಉಧೋ ಉಧೋ

    ಸಂತ್ರಸ್ತರ ಆ ಶೆಡ್ಡಿಗೆ ನಾಗವ್ವನ ಕುಟುಂಬ ಸ್ಥಳಾಂತರವಾಗಿ ಆರು ತಿಂಗಳಾಗಿತ್ತು. ನಾಲ್ಕಂಕಣದ ದಂಧಕ್ಕಿ ಮನಿ ಸಾರಿಸಿ ಪಡಿ ಹಿಟ್ಟಿನ ರೊಟ್ಟಿತಟ್ಟಿ ತಣ್ಣಗ ಮುಂದಿನ ಬಂಕಕ್ಕೆ ಕುಬಸ ಬಿಚ್ಚಿ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…