ಬಾವಿಯ ಪಕ್ಕದ ಮರದಲ್ಲಿ ಹಣ್ಣಾದ ಎಲೆಗಳು ಆಡುತ್ತಿದ್ದವು.
ಹೆಂಗಸರು ಬಟ್ಟೆ ಒಗೆಯುವ ಶಬ್ದದಲ್ಲಿ
ಮಾಗಿ ಅರಳುತ್ತಿತ್ತು, ಹಾಡುತ್ತಿತ್ತು.
ಮಾಳಿಗೆಯ ಮೇಲೆ ಒಬ್ಬನೇ ಮಲಗಿ ನಿದ್ದೆ ಹೋದೆ.
ಎಚ್ಚರ ಆದಾಗ ನನ್ನ ಪಕ್ಕದ ಅರ್ಧ ಹಾಸಿಗೆಯಲ್ಲಿ
ಬರೀ ಬೆಳದಿಂಗಳಿತ್ತು.
*****
ಚೀನೀ ಮೂಲ: ಪೋ ಚು-ಯಿ
Related Post
ಸಣ್ಣ ಕತೆ
-
ತಿಥಿ
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…
-
ಗೃಹವ್ಯವಸ್ಥೆ
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…
-
ಬಾಳ ಚಕ್ರ ನಿಲ್ಲಲಿಲ್ಲ
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
-
ವ್ಯವಸ್ಥೆ
ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…
-
ನಿಂಗನ ನಂಬಿಗೆ
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…