ದೊರಕುವದ್ಹಾಂಗ ಪರಮಾನಂದ

ದೊರಕುವದ್ಹಾಂಗ ಪರಮಾನಂದಾ
ಅರಿಯದು ಅದರಂದಾ
ದೊರೆಯದು ನಿನಗದು ಗುರುವರ
ಚರಣದ ಸೇವೆಯೊಳಕಾಗಿ ಬೆರೆಯದನಕಾ ||ಪ||

ಸರಸವಾದಖಿಳ ಭೋಗವನೆಲ್ಲಾ
ತ್ವರಿಸುವುದು ದುರಿತ ಕರ್ಮಗಳೆಲ್ಲಾ
ತೊರೆದು ಜನಕೆಲ್ಲ
ಕರುಣದಿ ಪರಮಸುಖದಾಯಕ ಗುರುವಿನ
ಕರಮಸ್ತಕದಲ್ಲಿ ಬೆರೆಯದಾತನಕ ||೧||

ಅರುವಿನೊಳ್ ಅಮಲ ಗುರುತವ ತೋರಿ
ಇರುವುದು ಆ ದಾರಿ
ಆರು ಮೂರು ಎರಡರ ದಾರಿ ಮೀರಿ
ನಿರುತದಿ ಸುಖಬೀರಿ
ಭಾರಿಯ ಪ್ರಣಯವು ಬೊರಿಡುತಲಿ ಮನ
ಸ್ಥಿರವಾಗಿಯೋನ್ಮನಿ ಸೇರದತನಕಾ ||೨||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಹೋಧವಾದೀತೆ ಆನಂದ
Next post ಬ್ರಹ್ಮಾನಂದದಿ ಮುಣಗ್ಯಾಡ್ವುದು ನೋಡು

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…