ಪೇಳಲಾಪರಿ ಕಿರಿದಾಗಿ, ಬೇಕಲ್ಲಾ ಹಿರಿ ಪ್ರತಿಭೆ?
ಪೇಳಿಹರೆಮ್ಮ ಹಿರಿಯರವರ ಜೀವನ
ದೊಳುಂಡನುಭವವ ಮೂರ್‌ನಾಕು ಸಾಲಿ
ನೊಳು, ಮಂತ್ರದೊಳು, ಗಣಿತದೊಳು
ಕೇಳಿದೆನಗಂತೆ ಕವನದ ಕಂತೆಯೊಳಿಡಲು
ಬಾಳಿನನುಭವ ಸಾಲದೆನ್ನ ಸಾಲುಗಳೈದಾಗಿಹವು -ವಿಜ್ಞಾನೇಶ್ವರಾ
*****