ಛಾಯೆ

ಯಾವ ತೀರದಿ ನಿಲ್ಲಲಿದೆಯೋ
ಜಗದ ಜೀವನ ನೌಕೆಯು…
ಭೀತ ಛಾಯೆಯು ನಿತ್ಯ ಕಾಡಿದೆ
ಯುದ್ಧ ಕಾರಣ ಛಾತಿಯು…

ಕ್ಷಿಪಣಿ-ಯಕ್ಷಿಣಿ ನಭದ ರಂಗದಿ
ರುದ್ರ ತಾಂಡವ ತಾಲೀಮಿದೆ…
ನಂಬಿ-ನಂಬದ ಮಾತಿನೊರೆಯಲಿ
ಜೀವ ಮಹತಿಯು ಸೊರಗಿದೆ…

ವಿನಾಶಿಯಾಗಲು ವಿಜ್ಞಾನ ಸಾಗಿದೆ
ಅವಿನಾಶಿಯಾಗಲು ವಿಜ್ಞಾನ ಸಾಗಿದೆ
ಅವಿನಾಶಿ ಆತ್ಮನ ತೊರೆದಿದೆ…
ಯಾವ ಸಾಧನೆಗಾಗಿ ಶೋಧನೆ
ನಾಳೆ ಬಿತ್ತಿ-ಬೆಳೆಸಲು ವೇದನೆ…

*****

 

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಜನೀತಿಯಲ್ಲಿ ಜಯವೋ
Next post ಜಾತಿ ಮಾಡಬ್ಯಾಡಿರಿ

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…