ದಾರಿ

ಬೆಳಗು ದೀಪವೆ ಬೆಳಗುತಿರು ನೀ…..
ನಿನ್ನ ಬೆಳಕಲಿ ಗುರಿಯಿದೆ…..
ಅನಂತ ನಿಶೆಯನು ದೂಡೋ ನಿನ್ನಯ
ನಿಯತಿಯಣತಿಗೆ ಗೆಲುವಿದೆ…..

ನಿತ್ಯ ಮೂಡೋ ಸತ್ಯ ನೇಸರ
ತುಂಬಿದಂಬರ ಕೀರ್ತಿಗೆ…..
ಧ್ಯಾನ ಮನನದ ಗಾನ ತುಂಬುರ
ಚಿದಂಬರಗೂಢದ ಹಾದಿಗೆ…..

ನೀನೆ ಗುರುವಿನ ಗುರಿಯು ದಾರಿಯು
ಅಂತರಂಗದರಿವಿನ ಲೀಲೆಗೆ
ಮುನ್ನ ಬಾಳಿನ ಪ್ರತಿಮೆ ರೂಪಿಯು
ನಡೆವ ಹಾದಿಯ ಬಾಳಿಗೆ…..

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಸಾರದ ಗೊಡವಿ ಇನ್ನ್ಯಾಕೆ
Next post ಹಲವು ಯೋಚನೆಯಿಂದ ಬಳಲಿದರೇನಿದು

ಸಣ್ಣ ಕತೆ

  • ನೆಮ್ಮದಿ

    ಅವನಿಗೆ ನೆಮ್ಮದಿ ಬೇಕಿತ್ತು. ಆ ಜನನಿಬಿಡ ರಸ್ತೆಯ ಪಕ್ಕದಲ್ಲಿರುವ ನ್ಯೂಸ್ ಪೇಪರ್ ಸ್ಟಾಲಿಗೆ ತಾಗಿ ನಿಂತು ಅವನು ರಸ್ತೆಯನ್ನು ವೀಕ್ಷಿಸುತ್ತಿದ್ದ. ಸೂರ್‍ಯೋದಯವಾಗಿ ಕೆಲವೇ ಗಂಟೆಗಳಾಗಿರಬಹುದು. ಜಾತ್ರೆಗೆ ಸೇರಿದಂತೆ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಕುಟೀರವಾಣಿ

    ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…