ನಮಗಲ್ಲ!

ನಾವು ಏನು ಅಲ್ಲ
ನಮಗೆಲ್ಲಿ ಬರಬೇಕದೆಲ್ಲಾ ಸೊಲ್ಲು
ನಮಗಲ್ಲ!

ಹೊರಗಿನದು ಬೇಕಿಲ್ಲ
ನಮ್ಮಲ್ಲಿಯೇ ನಮ್ಮವೇ ಇವೆಯಲ್ಲ
ಅಮೂಲ್ಯ ತನು, ಮನ, ಬುದ್ದಿ.

ಅರಿತು ಬಳಸಿರಿವುಗಳ
ಅಂತಃ ಶಕ್ತಿ ರೂಢಿಸುವುದು
ಸಾಧನೆಯ ಹಾದಿ ತಾನಾಗೇ ತೆರೆದುಕೊಳ್ಳುವುದು.

ಬಳಸದವರು ದೀನರು
ಬಳಸಿ ಬೆಳೆದವರು ಹಲವರು
ನೋಡಿ! ಎದುರುಗಿರುವರು
ಬುದ್ಧ, ಬಸವ, ಗಾಂಧಿ, ಅಂಬೇಡ್ಕರರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೇಟೆ
Next post ಕಟ್ಟಡದ ಕಟ್ಟುಗಳಲ್ಲಿ ಗಣಿತವಿದ್ದೀತು. ಕವನವಿದ್ದೀತೇ ?

ಸಣ್ಣ ಕತೆ

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…