ದೀಪ

ದೀಪ
ಬಾಳಿನ ಸಂಜ್ಞಾರೂಪ.

ಬುದ್ಧಿ ಉಪಯೋಗಿಸಿ
ತೆರೆ ಮರೆ ಮಾಡಿ
ಜೋಪಾನ ಮಾಡಿ
ಬೆಳಗುತ್ತದೆ; ಆನಂದ ತರುತ್ತದೆ.

ಅಜಾಗರೂಕರಾಗಿ
ಕೆಟ್ಟಗಾಳಿ
ತುಸುವೆ ಒಳ ತೂರಲು ಬಿಟ್ಟಿರಿ
ಅಂಕೆ ಶಂಕೆ ತಪ್ಪಿ
ಅಡ್ಡಾದಿಡ್ಡಿ ಉರಿಯುತ್ತದೆ.

ಹೊಯ್ದಾಡಿ, ನರಳಾಡಿ
ಎಣ್ಣೆ, ಬತ್ತಿ ಇರುವಾಗಲೆ
ಆರಿ ಹೋಗುತ್ತದೆ
ನಿರರ್ಥಕವಾಗುತ್ತದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅನಪೇಕ್ಷಿತ
Next post ಬಲು ತರಿದು ವರದಿ ಮಾಡಿದರದು ಕವನವಾದೀತೇ ?

ಸಣ್ಣ ಕತೆ

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಕನಸು ದಿಟವಾಯಿತು

    ಪ್ರಕರಣ ೨ ಸೂರ್ಯೋದಯವಾಯಿತು. ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಕಾಫಿ ಸೇವನೆಯನ್ನು ಮಾಡುತ್ತಾ ರಂಗಣ್ಣನು ಹೆಂಡತಿಗೆ ಕನಸಿನ ಸಮಾಚಾರವನ್ನು ತಿಳಿಸಿದನು. ಆಕೆ- ಸರಿ, ಇನ್ನು ಈ ಹುಚ್ಚೊಂದು ನಿಮಗೆ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…