ಹರಿವ ನದಿಗೆ ಹಾದಿ
ಯಾವುದೆಂಬ ನಿಯತಿಯಲದೆಲ್ಲಿದೆ?
ಮೊಳೆವ ಪ್ರೀತಿ-ಪ್ರೇಮಕೆಲ್ಲಿ
ಭಿನ್ನ-ಭೇದವೆಣಿಸಬೇಕಿದೆ?

ಬೀಸುಗಾಳಿಗೆ ಹೂವು ಅರಳಲು
ಸುಮದ ಕಂಪಿನ ಘಮ….. ಘಮ…..
ಹಾರಿಬರುವ ದುಂಬಿ ಮನದಲಿ
ಬಗೆ ಬಗೆಯ ಸಂಭ್ರಮ….. ||

ಬೆಸೆದ ಬೆಳಕಿಗೆ ಹೊಸತು ಹೊಸತಿನ
ನಿತ್ಯ ನೂತನ ನಂದನ
ಬುವಿಯ ಬಾನಿನ ಬಾಳ ಹಾದಿಗೆ
ಹಾಸಿ ಬೀಸಿದ ಚಂದನ

ಉರಿವ ಧಗೆಯಲಿ ದಿನವು ಮುಗಿದರೂ
ಮತ್ತೆ ಅರಳಿದೆ ಸುಮಬನ
ಅಂದಿನುಗಮವೇ ಅರಿದಿನಳೆವುದೆಂದರೂ
ನೆಗೆಯ ಸೂಸುವ ಬಂಧನ

*****

ಗಿರಿಜಾಪತಿ ಎಂ ಎನ್
Latest posts by ಗಿರಿಜಾಪತಿ ಎಂ ಎನ್ (see all)