ಮಾತು ಬಲ್ಲವರಲ್ಲಿ ಕೇಳಿದೆ
ಅರ್ಥವಾವುದು `ಪ್ರೀತಿಗೆ’…..
ಮಾತ-ಮಾತಿಗೆ ನಿಲುಕಲಾಗದ
ಮೌನದಳವಿನ ರೀತಿಗೆ
ಬರೆದೆ ಬರೆದರು `ಪ್ರೀತಿ’ಸುತ್ತಲು
ಭಾಷೆ-ಭಾಷ್ಯವ ಬಗೆ… ಬಗೆ
ಇನ್ನೂ ಬರೆವರ ಸಾಲ ಕಂಡು
ಮನದಿ ಹೊಮ್ಮಿತು ಚಿರುನಗೆ….
ಎಲ್ಲೆ ಹೋದರು…. ಎಲ್ಲೆ ಕಂಡರು
ಅಲ್ಲಿ ಪ್ರೀತಿಯ ಸೆಲೆ ಇದೆ
ಮರಳುಗಾಡಲೂ ನಗುತ ಬಾಳುವ
ಜೀವ್ಯ ಜಾಲದೆ ಬಲವಿದೆ….
ದಿಗಂತದಲ್ಲಿನ ಪ್ರೀತಿ ಛಾಯೆಯು
ಇಳೆಗೆ, ದಿನವನು ನೀಡಿದೆ…..
ಇಳೆಯ ಕಣದಲಿ ಮೊಳೆವ ಪ್ರೀತಿಯು
ಬಾನ ಮೆರುಗಿಗೆ ಕಾದಿದೆ…..
ಮನ-ಮನದಾಳದರಮನೆ
ಪ್ರೀತಿಯಾ ಸಿರಿ ನಂದನ…..
ಅರ್ಥ ಮೀರಿದ ಸಾರ್ಥಕತೆಯ
ಒಲವಿನೈಸಿರಿ ಚೇತನ…..
*****
Latest posts by ಗಿರಿಜಾಪತಿ ಎಂ ಎನ್ (see all)
- ಅಂತರಾಳ - December 11, 2018
- ಕಾಲ - December 4, 2018
- ಅಕ್ಕನ ಭಾವಗೀತೆ - November 27, 2018