ಸನ್ಮತಿ

ಇರಲಿ ನಿನ್ನಲಿ ಮಾನವತೆಯ
ರೀತಿ-ನೀತಿಯ ಸನ್ಮತಿ
ಉರಿವ ಧಗೆ ಹಗೆ
ಹೊತ್ತು ಸಾಗಿರೆ ನಿನ್ನುಳಿವಿಗೊದಗದೆ ದುರ್ಗತಿ

ಧುಮ್ಮಿಕ್ಕಿ
ದುಮುಕುತ
ಏರಿಳಿವ ಬಳಸುವಾ ಜಲವು ಸಾಗರ ಸೇರದೆ
ನಡೆವ ಹಾದಿಯತಿಲ್ಲ
ಚಿಗುರಿಸಿ ಹಸಿರ ಬಳಿಯದೆ ತಾನಿರುವುದೆ

ಬರುವುದೆಲ್ಲ ಬರುತಲಿರಲಿ
ನಗುವ ಸೂಸೋ ಮನವು ತಾ ನಿಜ ಬಾಂದಳ
ಅಷ್ಟು-ಇಷ್ಟು ಕಷ್ಟ ಸುಖಗಳ
ಅನುಭವದ ಕೂಟವೆ ನಮ್ಮ ಬದುಕಿನ ಅಂಗಳ

ಇರುಳು ಕವಿಯುವುದೆಂಬ
ಭಯವೇಕೆ ನಿನಗೆ ಹಿಡಿದಿದೆ
ಹಣತೆಯು ತಾ ಬೆಳಗಲು ಇರುತಿರೆ
ಸೊಗಸ ನಾಳೆಯು ಕಾದಿದೆ

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶ್ರೀ ಶಿವಾಪರಾಧ ಸ್ತೋತ್ರ
Next post ಬೆಳಕು

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

cheap jordans|wholesale air max|wholesale jordans|wholesale jewelry|wholesale jerseys