ಅಹಾ ಬಂತು ಬಂತು ಹಬ್ಬ

ಆಹಾ ಬಂತು ಬಂತು ಹಬ್ಬ
ನೀನು ಬಂದ ಗಳಿಗೆಗೆ
ಒಹೋ ಬಂತು ಬಂತು ಹರುಷ
ನೀನು ಕಂಡ ನಿಮಿಷಕೆ ||೧||

ನನ್ನ ಒಡೆಯ ನಲ್ಲ ರಾಯ
ಯುಗದ ಕೂಗು ಕೂಗಿದೆ
ಜಗದ ನೊಗದ ನೂರು ಭಾರ
ಚರಣ ತಲಕೆ ಬಾಗಿದೆ ||೨||

ನೀನೆ ಮೂಡು ನೀನೆ ಬೆಳಗು
ನೀನೇ ಹಿರಿಯ ಪ್ರೇರಣಾ
ನೀನೆ ಜನುಮ ಜೀವ ಯಾನ
ತನನ ತನನ ಕಾರಣಾ ||೩||

ಎಂಥ ಖಾರ ಕಾರಭಾರ
ಎದೆಯ ಮುದವ ಕೊಂದಿದೆ
ಅಣ್ಣ ಅಕ್ಕ ತಂಗಿ ತಮ್ಮ
ರಕ್ತ ರಕ್ತ ಕುಡಿದಿದೆ ||೪||

ಸಾಕು ಘೋರ ರುಧಿರಪೂರ
ರಾಜಹಂಸ ಹಾಡಲಿ
ಯಾಕೆ ಬೇಕು ಸ್ವೈರ ವೈರ
ಸ್ವರ್ಣ ಕಮಲ ಅರಳಲಿ ||೫||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕುಡುಕನ ಮಕ್ಕಳು
Next post ಜೋಕು

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…