ಒಲುಮೆಯ ಹೂವು

ಹೂವು ಕೋಮಲವು
ಒಲುಮೆಯೆ
ನಿಶ್ಚಯವಾಗಿಯೂ
ಹೂವಿನ ಬಲವು

ಹೂವು-
ಪ್ರಖರ ಸೂರ್ಯನನ್ನೂ
ದಿಟ್ಟಿಸಿ ನೋಡುವುದು
ಬಿರುಗಾಳಿಯನೂ
ಬೆದರಿಸಿ ಅಟ್ಟುವುದು
ಮಂಜಿಗೆ ಅಂಜದು
ಮಳೆಗೂ ತಲ್ಲಣಿಸದು

ದೇವರ ಕೊರಳನ್ನೂ
ತಬ್ಬುವುದು
ದಾಸಿಯ ಹೆರಳಲ್ಲೂ
ಹಬ್ಬುವುದು

ಮನುಷ್ಯನ ಉಗುರನ್ನೂ
ಹಸುವಿನ ಹಲ್ಲನ್ನೂ
ನಗುನಗುತಾ
ಎದುರಿಸುವುದು

ಹೂವು ಕೋಮಲವು
ಕೋಮಲತೆಯೆ
ನಿಶ್ಚಯವಾಗಿಯೂ
ಹೂವಿನ ಬಲವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಸ್ಸಂಜೆಯ ಮಿಂಚು – ೧೯
Next post ಮೀಸಲಾತಿ

ಸಣ್ಣ ಕತೆ

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…