ಜಗತಿನಲ್ಲಿ ಈಗ ಎಲ್ಲಿ ಯಾರೇ ಅಳುತ್ತಿರಲಿ,
ಕಾರಣವಿಲ್ಲದೆ ಅಳುತ್ತಿದ್ದರೆ, ನನಗಾಗಿ ಅಳುತಿದ್ದಾರೆ.
ಜಗತ್ತಿನಲ್ಲಿ ಈಗ ಎಲ್ಲಿ ಯಾರೇ ನಗುತ್ತಿರಲಿ,
ಕಾರಣವಿಲ್ಲದೆ ನಗುತ್ತಿದ್ದರೆ, ನನ್ನ ಕಂಡು ನಗುತ್ತಿದ್ದಾರೆ.
ಜಗತಿನಲ್ಲಿ ಈಗ ಎಲ್ಲಿ ಯಾರೇ ಹೋಗುತ್ತಿರಲಿ,
ಕಾರಣವಿಲ್ಲದೆ ಹೋಗುತ್ತಿದ್ದರೆ, ನನ್ನತ್ತ ಹೊರಟಿದ್ದಾರೆ,
ಜಗತ್ತಿನಲ್ಲಿ ಈಗ ಎಲ್ಲಿ ಯಾರೇ ಸಾಯಲಿ,
ಕಾರಣವಿಲ್ಲದೆ ಸತ್ತರೆ, ನನ್ನ ನೋಡುತ್ತಿರುತ್ತಾರೆ.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke