ಹೂ ನಗೆ ಬೀರಿದಾಗ – ೨

ಹೂನಗೆ ಬೀರಿದಾಗ
ಹೂ ಮಳೆ ಗರೆದಾಗ
ನನ್ನವಳ ಮೊಗವು ಅರಳಿತ್ತು ||

ಬಾನು ನಕ್ಕಾಗ
ಬಾಳು ಹಸನಾದಾಗ
ನನ್ನವಳ ಮನವು ಸೆಳೆದಿತ್ತು ||

ಮೌನ ಸೆಳೆದಾಗ
ಮಾತು ಬರದಾಗ
ನನ್ನವಳ ಭಾವವೂ ಹೊಳೆದಿತ್ತು ||

ಸ್ವಾತಿ ಮುತ್ತಿನ್ಹಾಂಗ
ಪ್ರೀತಿ ಹೊಳೆದಾಗ
ನನ್ನವಳ ಅಧರ ಕರೆದಿತ್ತು ||

ಜೀವ ಬೆಸೆದಾಗ
ಜೀವನ ಮುಡಿಪಾದಾಗ
ನನ್ನವಳ ಕನಸು ಮಿನುಗಿತ್ತು ||

ಕನಸು ನನಸಾಗಿ
ಮನಸು ಹಗುರಾಗಿ
ಬದುಕಲಿ ಬೆಳಕು ಹರಿದಿತ್ತು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಿಟ್ಟುಕೊಡುವ ಸಮಯ
Next post ಕುರುಡ

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…