ನಿನ್ನ ನೆನಪು

ನಿನ್ನ ನೆನಪು
ನಿನ್ನ ಕರುಣೆ
ನಿನ್ನ ಪ್ರೀತಿ
ನಿನ್ನ ಭಾವ
ನನಗೆ ಮುದವ ನೀಡಿದೆ ||

ನಿನ್ನ ಬಾಳು
ನಿನ್ನ ಬವಣೆ
ನಿನ್ನ ಮನಸು
ನಿನ್ನ ಹೊಸತು
ಮಾದರಿಯಾಗುಳಿದಿದೆ ||

ನಿನ್ನ ಸ್ನೇಹ
ನಿನ್ನ ಘನತೆ
ನಿನ್ನ ರೀತಿ
ನಿನ್ನ ನೀತಿ
ನನ್ನ ಸರ್ವಸ್ವ ಎನಿಸಿದೆ ||

ನಿನ್ನ ಕನಸು
ನಿನ್ನ ನೆನಪು
ನಿನ್ನ ಅರಿತು
ನಿನ್ನ ಬೆರೆತು
ಬಾಳಲೆನಗೆ ಮನಸಿದೆ ||

ನಿನ್ನ ಮಾತು
ನಿನ್ನ ಮೌನ
ನಿನ್ನ ಸಹನೆ
ನಿನ್ನ ತ್ಯಾಗ
ನನಗೆ ಪ್ರೇರಣೆ ನೀಡಿದೆ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅವತಾರ
Next post ಬಾ ಗೆಳತಿ ಕಾದಿರುವೆ

ಸಣ್ಣ ಕತೆ

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…