ಬೆವರಿನ ಹಾಡು

ಭೂಮಿ ಒಳಗಿಂದ
ಆಕಾಶ ಕಂಡವರು
ಆಕಾಶದೊಳಗಿಂದ
ಭೂಮಿಯ ಕಡೆದವರು
ಕೆಲಸ ಕೊಟ್ಟವರನ್ನು
ಮುಂದೆ ತಂದವರು
ಕೆಲಸ ಮಾಡುತ್ತಲೇ
ಹಿಂದೆ ಉಳಿದವರು.

ಮುಟ್ಟಬಾರದು ಎಂದರೂ
ಇತಿಹಾಸ ಕಟ್ಟಿದರು
ಊಳಿಗದ ಸೆರೆಯಲ್ಲಿ
ಉಸಿರನ್ನೆ ಉಂಡವರು
ಬೆವರಿನ ಮಸಿಯಲ್ಲಿ
ಬದುಕನ್ನು ಬರೆದವರು

ಭೂಮಿ ಬಸಿರಲ್ಲಿ
ಬದುಕನ್ನು ಹೆತ್ತವರು
ಒಲೆಯ ಉರಿಯಲ್ಲಿ
ಕಲೆಯನ್ನು ಕಂಡವರು
ಕತ್ತಲಿನ ಒಡಲಲ್ಲಿ
ಬೆಳಕನ್ನು ಹುಡುಕಿದರು
ಕರುಳಾಗಿ ಅರಳಿದರು
ಕಲಿಯಾಗಿ ಕೆರಳಿದರು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆ ದೇವರಿತ್ತ ಈ ವರವ
Next post ಅತ್ತೆಯ ಸಲಹೆ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಕನಸು ದಿಟವಾಯಿತು

    ಪ್ರಕರಣ ೨ ಸೂರ್ಯೋದಯವಾಯಿತು. ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಕಾಫಿ ಸೇವನೆಯನ್ನು ಮಾಡುತ್ತಾ ರಂಗಣ್ಣನು ಹೆಂಡತಿಗೆ ಕನಸಿನ ಸಮಾಚಾರವನ್ನು ತಿಳಿಸಿದನು. ಆಕೆ- ಸರಿ, ಇನ್ನು ಈ ಹುಚ್ಚೊಂದು ನಿಮಗೆ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…