ಲಿಂಗಮ್ಮನ ವಚನಗಳು – ೧೪

ತನು ನಷ್ಟವಾದರೇನಯ್ಯ,
ಮನ ನಷ್ಟವಾಗದನ್ನಕ್ಕ?

ವಾಕ್ಕು ನಷ್ಟವಾದರೇನಯ್ಯ,
ಬೇಕುಬೇಡೆಂಬುದನಳಿಯದನ್ನಕ್ಕ?

ಅಂಗ ಸುಖ ನಷ್ಟವಾದಡೇನಯ್ಯ,
ಕಂಗಳ ಪಟಲ ಹರಿಯದನ್ನಕ್ಕ?

ಮನ ಮುಗ್ಧವಾದಡೇನಯ್ಯ,
ಅಹಂಮೆಂಬುದ ಬಿಡದನ್ನಕ್ಕ?

ಇವೆಲ್ಲರೊಳಗಿರ್ದವೆಲ್ಲ ನೆನಿಸಿಕೊಂಬವರ
ನುಡಿಯ ಒಲ್ಲದು
ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ.
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಾಲೆಂಡಿನ ನಿಸರ್ಗ
Next post ಹರಿಯುವ ನೀರು

ಸಣ್ಣ ಕತೆ

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…