ಗಾಂಧಿ ಹುಟ್ಟಿದ್ದು

ಗಾಂಧಿ ಹುಟ್ಟಿದ್ದು
ನೆಟಾಲಿನ ರಾಜಧಾನಿಯಾದ
ಮೆರಿಟ್ಸ್ ಬರ್ಗ್‍ನಲ್ಲಿ
ರೈಲ್ವೆ ಪ್ಲಾಟ್ ಫಾರಂನಲ್ಲಿ
ಚೆಲ್ಲಾಪಿಲ್ಲಿಯಾದ
ಹಾಸಿಗೆ, ಪೆಟ್ಟಿಗೆ, ಕಾಗದಗಳ ನಡುವೆ

ಅಪರಾತ್ರಿ
ಹೊರಗೆ ಅಸಾಧ್ಯ ಚಳಿ
ಒಳಗೆ ಜ್ವಾಲಾಮುಖಿ
ನೋವಿನಿಂದ ಒದ್ದೆಯಾದ ಕಣ್ಣುಗಳು
ಮೈತುಂಬಾ ಅವಮಾನದ ಮುಳ್ಳುಗಳು…

ಚಳಿಗೆ ಸೆಟೆದ ಕಾಲುಗಳು
ದಂಡಿಗೆ ಸಿದ್ದವಾದದ್ದು
ಬೆಂಕಿ ಬೆಳದಿಂಗಳಾದದ್ದು
ಸತ್ಯಪ್ರೇಮ, ಅಹಿಂಸೆಯ
ದೀಕ್ಷೆ ಪಡೆದದ್ದು
ಎಲ್ಲಾ ಆ ಕ್ಷಣದಲ್ಲಿ…
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನವಿಲುಗರಿ – ೧೫
Next post ತೃಪ್ತಿ

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…