ಚಿತೆಗೇರಲಿಲ್ಲ ಹೂವುಗಳು

ಗಾಳಿ ತಂದಿತು
ದೀಪವಾರಿದ ಸುದ್ದಿ

ಒಂದು ಚಣ ಮೌನ
ನೋಡು ಎಂದಿತು ಹೃದಯ
ಬೇಡವೆಂದಿತು ಮನಸು

ನಿಮ್ಮ ಚಿತೆಗೇರಿಸಬೇಕೆಂದು
ಕೊಂಡಿದ್ದ ಎರಡು ನಸು ಹಳದಿ
ಗುಲಾಬಿ ಮೊಗ್ಗುಗಳು
ಇನ್ನೂ ಹಾಗೆಯೇ ಇವೆ
ನಳನಳಿಸುತ್ತಿವೆ ಹೂದಾನಿಯಲ್ಲಿ

ಸದ್ಯ ಬೂದಿಯಾಗಲಿಲ್ಲ
ಹೂವುಗಳು…
ಏನೋ ಸಮಾಧಾನ

ನಿಮ್ಮನ್ನು ದ್ವೇಷಿಸುತ್ತಲೇ
ಪ್ರೀತಿಸಿದೆವು ನಾವು
ನೀವೇ ಕಲಿಸಿದ ಪಾಠ
ವೈಭವೀಕರಿಸಲಾರೆ ನಿಮ್ಮ ಸಾವು

ಉಳಿದಷ್ಟು ದಿನ
ಉಳಿದೇ ಉಳಿಯುವುದು
ಅಗಲಿಕೆಯ ನೋವು

(ಪಿ. ಲಂಕೇಶ್‍ಗೆ ಶ್ರದ್ಧಾಂಜಲಿ)
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭ್ರಮಣ – ೩
Next post ಊಸುರವಳ್ಳಿ

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…