ದೂಡಿದರೆ ನನ್ನನ್ನು

ದೂಡಿದರೆ ನನ್ನನ್ನು
ಸರಳುಗಳ ಹಿಂದೆ
ಕಾಣುವುದು ನೀವೇ
ಸರಳುಗಳ ಹಿಂದೆ – ನನಗೆ
ಕಾಣುವುದು ನೀವೇ
ಸರಳುಗಳ ಹಿಂದೆ ||

ಬದುಕು ಒಂದು ಆಟ
ಆಡಿ ನಲಿಯಬೇಕು
ಆಡಿ ನಲಿಯದಿರಲು
ನೋಡಿ ನಲಿಯಬೇಕು
ಸಂಚು ಹೊಂಚು ಏಕೆ?
ನಾ ಬರಿಯ ದೇಹವಲ್ಲ
ಕೊಲ್ಲಬಹುದು ಕೊನೆಗೆ
ನನಗೆ ಸಾವೆ ಇಲ್ಲ

ಕೊಂದವರು ಈವರೆಗೆ
ಉಳಿದ ನಿದರ್ಶನವಿಲ್ಲ
ಅಳಿದವರು ಮಾತ್ರ
ನಮ್ಮೊಳಗಿಹರಲ್ಲ
ಕತ್ತಲು ಓಡುವುದು
ಬೆಳಕನ್ನು ಕಂಡು
ಬೆಳಕು ಓಡುವುದೇ
ಕತ್ತಲನು ಕಂಡು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹರಿವ ತೊರೆಯ ಅಲೆ
Next post ದೇವರು ಮತ್ತು ಸೈತಾನ

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…