ಲಿಂಗಮ್ಮನ ವಚನಗಳು – ೩೩

ಮಾಣಿಕವ ಕಂಡವರು ತೋರುವರುಂಟೇ?
ಮುತ್ತ ಕಂಡವರು ಅಪ್ಪಿಕೊಂಬುವರಲ್ಲದೆ,
ಬಿಚ್ಚಿ ತೋರುವರೇ?  ಆ ಮುತ್ತಿನ ನೆಲೆಯನು
ಮಾಣಿಕ್ಯದ ನೆಲೆಯನು ಬಿಚ್ಚಿ ಬೇರಾಗಿ
ತೋರಿ ರಕ್ಷಣೆಯ ಮಾಡಿದ ಕಾರಣದಿಂದ,
ಬಚ್ಚ ಬರಿಯ ಬೆಳಗಿನೊಳಗೋಲಾಡಿ ನಿಮ್ಮ
ಪಾದದೊಳಗೆ ನಿಜಮುಕ್ತಳಾದೆನಯ್ಯ
ಚನ್ನಮಲ್ಲೇಶ್ವರ ಅಪ್ಪಣಪ್ರಿಯ ಚನ್ನಬಸವಣ್ಣಾ.
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅನ್ವೇಷಣೆ
Next post ಕೃಷ್ಣಾಕುಮಾರಿಯ ಆತ್ಮಹತ್ಯೆ

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…