ನಾರು, ಬೇರು, ಪತ್ರೆ, ಫಲ, ಹಸುರುಹ
ಸುರಿಗು ತರತರದ ಬರತರದವಯವವು
ನೀರ ಕುಡಿಯಲಿಕೆ, ಮಣ್ಣ ತಿನ್ನಲಿಕೆ
ಬರಿಯೆಲೆಯೆ ಮಡಕೆ, ಸೌರ ಶಾಖದೊಳಡುಗೆ
ಸೂರ್‍ಯನೊಲವಿನ ಕೊಡುಗೆ, ಹಸುರುಡುಗೆ ಸಾವಯವ – ವಿಜ್ಞಾನೇಶ್ವರಾ
*****