ಸುಮ್ಮನೆಂದರದು ಸಾವಯವವಾದೀತೇ ?

ನಿಮಿಷಕದಿನಾರು ಉಸಿರು. ಬಾಯಾರಿ ಹತ್ತಾರು ನೀರು
ಕಮ್ಮಿಯೊಳನ್ನ ಮೂರು ದೊರೆಕೊಂಡೊಡೆಲ್ಲ ಕಾರುಬಾರು
ಹಮ್ಮಿನಾ ಮೊದಲೊಮ್ಮೆ ಸುಮ್ಮನಾಲೋಚಿಸುತ
ಆಮಿಷದ ಬಾರು ಕಾರನು ಮಿತಿಯೊಳಿರಿಸುತ
ಲೆಮ್ಮ ಭುವನದಾರೋಗ್ಯ ಉಳಿಸಿದರದುವೆ ಸಾವಯವ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಂತನು ಮರಳಿ ಬಂದಾಗ
Next post ನಿನ್ನ ಧಿಕ್ಕರಿಸಿದ ತರ್ಕ

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…