ಅಲ್ಲೀಕೇರಿಗೆ ಹೋಗುನು ಬರ್ತೀರೇನ್ರೇ

ಅಲ್ಲೀಕೇರಿಗೆ ಹೋಗುನು ಬರ್ತೀರೇನ್ರೇ ನೀವು
ಒಲ್ಲದಿದ್ದರೆ ಇಲ್ಲೆ ಇರತೀರೇನ್ರೇ ||ಪ||

ಕಲ್ಲೌ ಮಲ್ಲೌ ಕೂಡಿಕೊಂಡು ದೀವಳಿಗೆ ಹಬ್ಬದಲ್ಲಿ
ಉಲ್ಲಾಸದಿಂದ ಅಲ್ಲಮಪ್ರಭುವಿನ ಮರೆತೀರೇನ್ರೇ ಇಲ್ಲೇ ಇರತೀರೇನ್ರೇ ||ಅ.ಪ.||

ಮಡಿಯನುಟ್ಟು ಮೀಸಲದಡಗಿ ಮಾಡಬೇಕ್ರೇ ಅದಕೆ
ತಡವು ಆದರೆ ನಿಮ್ಮ ಗೊಡವಿ ನಮಗೆ ಯಾಕ್ರೇ
ಹುರಕ್ಕಿ ಹೋಳಿಗೆ ಹೂರಣಕಡಬು
ಕಡಲಿ ಪಚ್ಚಡಿ ಕಟ್ಟಿನಾಂಬ್ರಾ
ಚಟಗಿ ಮುಚ್ಚಳ ಬಾನದ ಗಡಗಿ ಹೆಡಗಿ ಜೋಕ್ರೆ ನೀವು
ದೇವರ ಗುಡಿಗೆ ದೃಡದಿ ಹೋಗಿ ಧೂಪ ಹಾಕ್ರೇ ||೧||

ಊರ ಹೊರಗಿನ ಸಾರಿ ಮೀರಿದ ಸ್ಥಳವ ನೋಡ್ರೆ ಅದಕ
ಸೇರದಿದ್ದರ ನಿಮ್ಮ ಸ್ನೇಹ ನನಗೆ ಬ್ಯಾಡ್ರೇ
ಮೂರು ಗಿರಿಯ ಮರೆಯಲ್ಲಿರುವ
ನೀರು ತರುವ ಕೆರೆಯ ಬದಿಗೆ
ಜಾರುತರದ ಬುರುಜಿನೊಳು ಬಾಜಾರ್ ಹೂಡ್ರೆ ಮುಂದೆ
ಪಾರುಗಾಣುವಂಥ ಸುಸ್ರಿ ತಂದು ಇಡ್ರೇ ||೨||

ವಸುಧೆಯೊಳು ಶಿಶುನಾಳಧೀಶನ ಹೆಸರು ಹೇಳ್ರೇ ಹೇಸಿ
ವ್ಯಸನಿಕರಾದವರೆಲ್ಲ ಇದಕ ಬರಲೇ ಬೇಡ್ರೇ
ಕುಶಲದಿಂದ ಕೋಲ ಪಿಡಿದು
ಹಸನಾಗಿ ಪದ ನುಡಿದು
ರಸಿಕರಾದವರೆಲ್ಲ ನೀವು ಕೂತು ಕೇಳ್ರೇ ತುಸು
ಕಸರು ಇದ್ದರೆ ಇಲ್ಲಿ ಅದನು ತಿದ್ದಿ ಹೇಳ್ರೇ ||೩||

****

 

ಕೀಲಿಕರಣ : ಎಂ.ಎನ್.ಎಸ್. ರಾವ್

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುಜಗುಜಮಾಪೂರ ಆಡೋಣ
Next post ಸಾಧುಗಳಿಗೆ ಶಿವನ ಚಿಂತೆ

ಸಣ್ಣ ಕತೆ

 • ಕೊಳಲು ಉಳಿದಿದೆ…

  -

  ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… ಮುಂದೆ ಓದಿ.. 

 • ಸಾವು

  -

  ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… ಮುಂದೆ ಓದಿ.. 

 • ಸ್ನೇಹಲತಾ

  -

  ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… ಮುಂದೆ ಓದಿ.. 

 • ಅವನ ಹೆಸರಲ್ಲಿ…

  -

  ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… ಮುಂದೆ ಓದಿ.. 

 • ವರ್ಗಿನೋರು

  -

  ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… ಮುಂದೆ ಓದಿ..