ಬತ್ತಿದ ಆಸೆ

ಆಸರೆ ಬಯಸಿದ ಜೀವ
ಮಗನ ಬೆಳೆಸಿತು ನೋಡ
ಇಳಿ ವಯಸಿನಲಿ ತನಗೆ
ಊರುಗೋಲಾಗಲೆಂದು.

ಮಡಿಲಲಿ ಹೊತ್ತು ತುತ್ತ ಇತ್ತು
ವಿದ್ಯೆಯ ಇತ್ತು ಸಂಸ್ಕಾರವ ಕೊಟ್ಟು
ಬೆಳೆಸಿದರು ಮಗನ ನಲಿಯುತ
ಕುಲ ಕೀರ್ತಿ ಬೆಳಗಲೆಂದು.

ಮಗನ ಬೆಳಸಿದ ಜೀವ
ಮದುವೆ ಮಾಡಿತು ನೋಡ
ವಂಶ ಕೀರ್ತಿ ಬೆಳಗಲೆಂದು
ಮನೆತನವ ಉಳಿಸಲೆಂದು

ಬಂದಿರುವ ಸತಿಗೆ
ಒಲಿದಿತ್ತು ಮನವು
ಮರೆತಿತ್ತು ಹೆತ್ತ ಕರುಳ
ಪ್ರಣಯದ ಹಾದಿಯಲಿ.

ಮಗನ ಬೆಳಸಿದ ಜೀವ
ಮರಳಿ ತಾಳದೆ ನೋವ
ಸವೆಸಿ ಮುಗಿಸಿತು ಬದುಕು
ನನಸಾಗದೆ ಹೋಯ್ತು ಕನಸು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಂಗರಕ್ಷಕ
Next post ಪೂರಕ

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ದೇವರ ನಾಡಿನಲಿ

    ೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…