ನೆನಪು

ಜೀವವಿದ್ದರೂ
ನೆನಪಿಗೆ ಬಾರದು
ಸವಿ ಸಂಭ್ರಮದಾ ಕ್ಷಣ
ನಾವು ಹುಟ್ಟಿದಾಗ.

ಜೀವವಿಲ್ಲದಿದ್ದರೂ
ನೆನಪಿಗೆ ಬಾರದು
ಶೋಕ ಸಂಭ್ರಮದಾ ಕ್ಷಣ
ನಾವು ಸತ್ತಾಗ.

ನೆನಪಿರದ ಆ ಕ್ಷಣ
ನೆನಪಿರದ ಈ ಕ್ಷಣ
ಮರುಕಳಿಸಲಾರವು
ಇನ್ನೊಂದು ದಿನ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಲೆ
Next post ವ್ಯಕ್ತಿಗತ

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…