ಮಾನಾಪಮಾನ ನಿನ್ನವಮ್ಮಾ

 

ಮಾನಾಪಮಾನ ನಿನ್ನವಮ್ಮಾ ಎನಗೇನು
ಶ್ವಾನನಂತೆ ಬೊಗಳುತಿಹರು ಹೀನ ಜನರೆಲ್ಲರಿವರು ||ಪ||

ಸದಾ ನಿನ್ನ ಧ್ಯಾನದೊಳಿರಲು
ಮದಾ ಬಂದಿತೆಂಬುವರಿವರು
ಕದನವ ಮಾಡುವರಿವರು
ನಿಧಾನವ ತಿಳಿಯದೆಯವರು
ಇದು ನಿನ್ನ ಮನಸ್ಸಿಗೆ
ಮೃದುವಾದರೊಳಿತಮ್ಮಾ ||೧||

ನಿನ್ನ ಚಿಂತೆಯೊಳಿರಲು
ಖಿನ್ನ ಪಡಿಸುವರೆನ್ನ ಖೂಳರು
ಸಣ್ಣ ಮಾತನಾಡುವವರು
ಸೊನ್ನಿ ಸೂಕ್ಷ್ಮವನರಿಯದವರು
ಎನಗೇನು ಕುಂದುವದು
ನಿನಗದು ಹೊಂದುವದು ||೨||

ನಿಜಾನಂದ ಬೋಧ ಎನಗೆ
ಕುಜನರ ನಿಂದೆ ನಿನಗೆ
ಸುಜನರ ರಕ್ಷೆಯೊಳಗೆ
ಗಜಿಬಿಜಿ ಬರುವದು ನಿನಗೆ
ಭಜಿಸುವೆ ಗುಡಿಪುರೇಶನ
ನಿಜ ವಿಷಯ ನಾಯಕಿ ||೩||
* * * *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತರವಲ್ಲ ತಂಗಿ ನಿನ್ನ ತಂಬೂರಿ
Next post ಪಾಹಿ ಪರಬ್ರಹ್ಮಣಿ ತ್ರಾಣಿ

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…