ಬಿಡು

ಹರಿಯುತಿರುವ ನದಿ
ಹರಿಯುತಿರಲಿ ಬಿಡು
ತಡೆಯನೆಂದೂ ಒಡ್ಡದಿರು
ಬದುಕನೆಂದೂ ಕದಡದಿರು
ಗಡಿಯನೆಂದೂ ನೀಡದಿರು
ಆಶಯವನು ಬಿಡದಿರು
ನಿರೀಕ್ಷೆಯನು ಸುಡದಿರು

ಮೋಡ ಚಲಿಸುತ್ತದೆ
ಬಿಸಿಲು ಬಾಡುತ್ತದೆ.
ವರ್ಷಗಳು ಉರುಳುತ್ತವೆ
ಅಂಗಾಂಗಗಳು ಕುಸಿಯುತ್ತವೆ.
ಉಸಿರು ನಿಲ್ಲುತ್ತದೆ.
ನಿಲ್ಲಲಿ ಆದರೆ
ನದಿ ಹರಿಯುತ್ತಿರಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನಕ-ಕೃಷ್ಣ
Next post ಕಾಯಕ

ಸಣ್ಣ ಕತೆ

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…