ಉತ್ತರ ಧ್ರುವದಿಂದ ದಕ್ಷಿಣ ಧ್ರುವಕೆ
ಬೀಸುತ್ತಿದ್ದ ಚುಂಬಕ ಗಾಳಿ ಈಗ
ಬಿರುಸಾಗಿದೆ. ಕಸ ಕಡ್ಡಿಯನ್ನೆಲ್ಲಾ
ತೂರುತ್ತಿದೆ ಅಂದಿನ ಸೂರ್ಯ
ಚಂದ್ರರ ಅವಿನಾಭಾವ ಸಂಬಂಧ
ಮಿತಿ ಮೀರುತ್ತಿದೆ. ಬಯಕೆ ದಾಂಗುಡಿ
ಯಿಡುತ್ತಿದೆ. ಒಂದಾಗುವಾತುರ
ತೋರುತ್ತಿದೆ. ಮತ್ತೆ ಗಾಳಿ ಬೀಸುವ
ವರೆಗೆ ಮೌನ ಮಾತಾಡಿದೆ.
*****
Related Post
ಸಣ್ಣ ಕತೆ
-
ಸ್ವಯಂಪ್ರಕಾಶ
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…
-
ಸಂಶೋಧನೆ
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ಜುಡಾಸ್
"ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…
-
ಮತ್ತೆ ಬಂದ ವಸಂತ
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…