ಬಾ ನೋಡುನು ಭಾಮಿನಿ

ಬಾ ನೋಡುನು ಭಾಮಿನಿ ಈ ನಗರದಿ
ಆ ಮಹಾಮಹಿಮನು ಬಂದಿಹನಮ್ಮಾ
ಮೀನಾಕ್ಷಿಯನುಭವಮಂಟಪ ಮಧ್ಯದಿ
ತಾನೇತಾನಾಗಿ ಕುಳಿತಿಹನಮ್ಮಾ || ೧ ||

ಎಡ್ಡಿಸುತಲಿ ಮನಿ ಮನಿ ತಿರುಗುತ ಘನ
ಕಡ್ಡಿ ಕಸರು ಕಳೆದಿಹನಮ್ಮಾ
ದುಡ್ಡು ಕಾಸಿಗೆ ಕೈಯೊಡ್ಡದೆ ಕಲಿಯೊಳು
ಗುಡ್ಡನೇರಿ ಕುಳಿತಿಹನಮ್ಮಾ || ೨ ||

ಶಿಶುನಾಳಧೀಶನ ಸೇವಕೆನುತಾ
ಅಸಮಗೋವಿಂದನಾಗಿಹನಮ್ಮಾ
ತುಸು ಭೀತಿಯಿಲ್ಲದೆ ಬತ್ತಲೆ ತಿರುಗುವ
ಕತ್ತಲಿಗಂಜದೆ ಇಹನಮ್ಮಾ || ೩ ||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಾಧುರಿಗೊಂದಿಸುವೇ ನಿತ್ಯದಿ ದಿವ್ಯ
Next post ಶಿವಲೋಕದಿಂದ ಒಬ್ಬ ಸಾಧು ಬಂದಾನು

ಸಣ್ಣ ಕತೆ

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…