ಜೀವನತೆರೆ

ಜೀವನವೆಂಬ ಸಾಗರದಲಿ
ಕಾಣದ ನಾವಿಕನಾಶ್ರಯದಿ
ಪಯಣಿಸುವ ಪಯಣಿಗರು
ಪ್ರಯಾಸ-ಪರಿಶ್ರಮದಲಿ…
ದೃಢ-ವಿಶ್ವಾಸಗಳ ಹುಟ್ಟುಗೋಲಾಡಿಸುತ
ನಿರ್ಭೀತಿ-ನಿರ್ಲಿಪ್ತತೆ… ಹೊರದೂಡುತ
ಗೆಲುವನು ದೂರದಲಿ ಕಾಣುತ…
ಧೈರ್ಯದ ಸವಾರಿಯಲಿ ನಡೆಯುವಾ

ನಿರಾಶೆಯ ತೆರೆಗಳ ತಳ್ಳುತ…
ಆಶಾ-ಹಕ್ಕಿಗಳಾಗಿ ಹಾರುತ
ಬಯಕೆಯ ಬಾನಲಿ ತೇಲುತ
ಸಾಗೋಣ ದಡ ಸೇರುವ ಗುರಿಯಲಿ

ಜೀವನವು ಸಂಘರ್ಷಗಳ ತಾಣ
ಅವಿರತ ಹೋರಾಟದ ಕಣ
ದಿಟ್ಟತನದ ಬಾಳಲ್ಲಿ…
ಸೋಲು ಸವಾಲಾಗಿಸುತ
ಎದ್ದೇಳುವ ಕಲೆ ರೂಢಿಸುತ
ಸೌಹಾರ್ದತೆಯ ಸಮಬಾಳಲಿ
ಅರಳೋಣ-ಮಿಂದು ಬೆಳಗುತಲಿ

*****

 

ಕೀಲಿಕರಣ : ಕಿಶೋರ್‍ ಚಂದ್ರ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೯
Next post ನಗೆ ಡಂಗುರ – ೧೦

ಸಣ್ಣ ಕತೆ