ನಾ ಹೇಳಲಾರೆ

ನಾ ಹೇಳಲಾರೆ ನಾ ನಿನ್ನ ಪ್ರೀತಿಸುವೆ
ಅರಿಯುವುದಾದರೆ ಅರಿ, ಇಲ್ಲವೆ ಇರಿ //ಪ//

ನಾ ನೋಡುತಿರುವ ಈ ಮಳೆಬಿಲ್ಲು
ಬಾಗಿ ಹೇಳಿಲ್ಲವೆ ನನ್ನ ಪ್ರೀತಿ
ನಾ ಆಡುತಿರುವ ಈ ಹೊಸ ಸೊಲ್ಲು
ಕೇಳಿದೆಯೆ ಬರಿ ಕವನದ ರೀತಿ
ಎಲ್ಲವ ಓದುವ ಓ ಜಾಣೆ – ಈ
ಕಣ್ಣನು ಓದಲು ತಡವೇನೆ?

ನೀ ನಡೆದಾಡುವ ದಾರಿಯಲಿ
ಅರಳುತಿಲ್ಲವೆ ಹೊಸ ಹೂವು
ನವ ಸುಗಂಧ ನಿನ್ನೆಡೆ ಸೂಸಿ
ತೋರುತಿಲ್ಲವೆ ನನ್ನೊಳ ನೋವು
ನನ್ನನು ತುಂಬಿದ ಓ ಗೆಳತಿ
ಮರೆತೆಯ ಬಾಳನು ತುಂಬುವ ರೀತಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಂಗಣ್ಣನ ಕನಸಿನ ದಿನಗಳು – ೧೧
Next post ರೋಗ

ಸಣ್ಣ ಕತೆ

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…