ಪುಸ್ತಕದ ಕವಿತೆಗಿಂತ

ಪುಸ್ತಕದ ಕವಿತೆಗಿಂತ – ನಿನ್ನ
ಕಣ್ಣು ಬರೆವ ಕವಿತೆ ಚೆಂದ
ಅದ ಬರೆದುಕೊಂಡೆ ನನ್ನ ಎದೆಯಲ್ಲಿ
ಅದಕಾಗಿ ಕವಿಯಾದೆ ನಿನ್ನ ಋಣದಲ್ಲಿ /ಪ//

ನೂರು ಹಾಡು ಕೇಳಿರುವೆ ನಾನು
ನಿನ್ನ ಮಾತು ಅದ ಮರೆಸಿದೆ
ನೂರು ನಾಟ್ಯ ಕಂಡಿರುವೆ ನಾನು
ನಿನ್ನ ಹೆಜ್ಜೆ ಅದ ಮರೆಸಿದೆ
ನಂಬು ಇದು ಅಲ್ಲ ಕವಿತೆ – ನೀ
ನನ್ನಲ್ಲಿ ಕೊರೆದ ಹೊಸ ಚರಿತೆ

ನಿಟ್ಟಿಸಿ ನೀನು ನೋಡದಿರು ಹಾಗೆ
ಮೂಡೀತು ಮಹಾಕಾವ್ಯ
ಅದ ನೀ ಮಾತ್ರ ಓದಿದರೆ ಸಾಕು
ನನ್ನ ಬದುಕು ಖಂಡಿತ ಭವ್ಯ
ನೋಟ ಸುಂದರ, ಕಾರಣ
ಬದುಕು, ಅದರ ಹೂರಣ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಲಿತಾವತಾರ
Next post ಹಸಿವು ೧

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

cheap jordans|wholesale air max|wholesale jordans|wholesale jewelry|wholesale jerseys