ಮಾತಿಲ್ಲದ ಕವಿತೆ

ಮಾತಿಲ್ಲದ ಕವಿತೆ
ನೀ ಹಾಡಿದೆ
ಈ ಹಾಡಿಗೆ ನನ್ನ
ಕವಿತೆ ಸೋತಿದೆ ||

ಮಾತು . . . ಮಾತು . . .
ಜಗವೆಲ್ಲ ಮಾತು
ಕಿವಿಯಾಗಿದ್ದರೂ
ದೊಡ್ಡ ತೂತು
ತಿಳಿಯುತ್ತಿಲ್ಲ
ಯಾವುದೆ ಅರ್ಥ
ಇನ್ನೀ ವ್ಯಾಕರಣ
ಅಲ್ಲವೆ ವ್ಯರ್ಥ?

ಭೂರಮೆ ಮಾತು
ಅರಿವುದು ಮುಗಿಲು
ನದಿಗೆ ಅಪ್ಪುಗೆ
ದೂರದ ಕಡಲು
ಮನುಜರು ಆಡಲು
ತಿಳಿಯದು ಮಾತು
ಇದಕೆ ಹೇಗಾದೆ
ನೀ ಹೊರತು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಾಯಶ್ಚಿತ್ತ
Next post ಕಣ್ಣೀರು

ಸಣ್ಣ ಕತೆ

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಜಂಬದ ಕೋಳಿ

    ಪ್ರಕರಣ ೩ ಜನಾರ್ದನ ಪುರದ ಹಳೆಯ ಇನ್ಸ್‍ಪೆಕ್ಟರಿಗೆ ಮೇಷ್ಟರುಗಳೆಲ್ಲ ಬೀಳ್ಕೊಡುವ ಔತಣವನ್ನು ಏರ್ಪಾಟು ಮಾಡಿದ್ದಾರೆ. ಹಳೆಯ ಇನ್‍ಸ್ಪೆಕ್ಟರು ಒಂದು ಸಾಮಾನ್ಯ ಪಂಚೆಯನ್ನು ಉಟ್ಟು ಕೊಂಡು, ಒಂದು ಚೆಕ್ಕು… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…