ಹೋಗಲಾರೆ ನಾ ದೇಗುಲಕೆ

ಹೋಗಲಾರೆ ನಾ ದೇಗುಲಕೆ
ಹೃದಯವೆ ದೇಗುಲವಿಲ್ಲಿ
ದೇವರು ಒಬ್ಬರೂ ಇಲ್ಲಿಲ್ಲ
ದೇವತೆ ಮಾತ್ರವೆ ಇಹಳಿಲ್ಲಿ \\ಪ\\

ಎತ್ತಿರುವೆ ನಾ ಆರತಿಯ
ಕಂಗಳಲಿ ಜೋತಿಯ ಉರಿಸಿ
ಪಠಿಸುತ್ತಿರುವೆ ಮಂತ್ರವನು
ಪ್ರಣಯದಾಟದಿ ತುಟಿ ಮಿಡಿಸಿ
ಪ್ರಸನ್ನವಾಗಿದೆ ಮುಖಾರವಿಂದ
ಇದಕಿಂತ ವರ ಯಾವುದು ಚೆಂದ?

ಹೊರಟರೆ ದೇವಿ ಮೆರವಣಿಗೆ
ಹೃದಯವೆ ಬೀದಿ ಆಗುವುದು
ತೆರೆದರೆ ಕಣ್ಣು ಕರುಣೆಯಲಿ
ಬದುಕಲಿ ಸುಗ್ಗಿ ಮೂಡುವುದು
ನನಗಿರುವುದು ದೇವತೆ ಮಾತ್ರ
ದೇವಿಗೆ ಭಕ್ತ ನಾ ಮಾತ್ರ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತ್ರಿಪಾದ
Next post ಕಸಿ

ಸಣ್ಣ ಕತೆ

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…