ಬಸವ ಚೇತನ ಕನಸು ಚಿಮ್ಮಲಿ

ಬನ್ನಿ ಬನ್ನಿರಿ ದೇವ ತರುಗಳೆ
ನಗುವ ಮಲ್ಲಿಗೆ ಹೂಗಳೆ
ಬನ್ನಿ ಬನ್ನಿರಿ ಹೂವು ತನ್ನಿರಿ
ಸಹಜ ಸುಂದರ ಮಣಿಗಳೆ

ಬಸವ ಚೇತನ ಕನಸು ಚಿಮ್ಮಲಿ
ಲಿಂಗ ಗೊಂಚಲು ಹೊಮ್ಮಲಿ
ಶಿವನ ಬೆಳಗು ಹಬ್ಬಿಹರಡಲಿ
ವಿಶ್ವ ಸುಂದರವಾಗಲಿ

ದೇವನೊಬ್ಬನು ನಾಮ ಹಲವು
ಮನುಜ ಮಂಚವ ತೂಗುವಾ
ನಾವು ಸಕಲರು ಸೋದರಾತ್ಮರು
ಸತ್ಯ ಘೋಷಣೆ ಕೂಗುವಾ

ಮುಳ್ಳು ಹೋಗಲಿ ಹೂವು ಅರಳಲಿ
ಹಾಲುಜೇನು ಹರಿಯಲಿ
ಸಕಲ ಜೀವಾತ್ಮರರ ಲೇಸನೆ
ಶರಣ ಮಂತ್ರವು ಬೆಳಗಲಿ
ವಿಶ್ವ ಮಂದಿರವಾಗಲಿ
ಜೀವ ಜಂಗಮ ತೂಗಲಿಽಽಽ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇಷ್ಟ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೦೨

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…