ಈ ಕೊರಗು
ಹಣ್ಣೆಲೆ ಮಣ್ಣಿಗೆ ಉರುಳಲು
ಹೆದರಿದ ದನಿಯಲ್ಲ,
ಗೇಯದ ಪ್ರಾಯದ ಮಾಯುವ
ಹುಸಿ ಕಂಗಾಲಲ್ಲ,
ಗಾಯಕರೆದ ಮದ್ದಲ್ಲ
ಡೊಳ್ಳಿನ ಸದ್ದೇ ಅಲ್ಲ.
ಹಸಿದ ಕರಣ ಭರ್ತಿ ಉಂಡು
ಮರಣದೊಳಿದ್ದಾಗ
ನನ್ನ
ಹರಣ ಕಂಡ ಕನಸು,
ಕಾಣುವ ದೃಶ್ಯದ ಟೊಳ್ಳು ಕಟ್ಟಿಕೊಟ್ಟ ಉಣಿಸು.
*****
Related Post
ಸಣ್ಣ ಕತೆ
-
ಒಂದು ಹಿಡಿ ಪ್ರೀತಿ
ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…
-
ಮರೀಚಿಕೆ
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…
-
ಯಿದು ನಿಜದಿ ಕತೀ…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…
-
ವರ್ಗಿನೋರು
ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…
-
ಆವರ್ತನೆ
ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…