ಕಲಿಸು ನನಗೆ ಕಲಿಸು

ಕಲಿಸು ನನಗೆ ಕಲಿಸು

ಬೆಳಕ ನಾ ಬಯಸಿದಂತೆ
ಕತ್ತಲ ಸ್ವಾಗತಿಸಲು
ಬೆಳಕು ಕತ್ತಲುಗಳೆರಡೂ
ಸೇರಿಯೆ ದಿನವೆಂದು

ಸುಖವ ನಾ ಬಯಸಿದಂತೆ
ದುಃಖವ ಸ್ವಾಗತಿಸಲು
ಸುಖ ದುಃಖಗಳೆರಡೂ
ಸೇರಿಯೆ ಬದುಕೆಂದು

ಶುಕ್ಲವ ನಾ ಬಯಸಿದಂತೆ
ಕೃಷ್ಣವ ಸ್ವಾಗತಿಸಲು
ಶುಕ್ಲ ಕೃಷ್ಣಗಳೆರಡೂ
ಸೇರಿಯೆ ತಿಂಗಳೆಂದು

ಸುಗ್ಗಿಯ ನಾ ಬಯಸಿದಂತೆ
ಮಾಗಿಯ ಸ್ವಾಗತಿಸಲು
ಸುಗ್ಗಿ ಮಾಗಿ ಎರಡೂ
ಸೇರಿಯೆ ವರ್ಷವೆಂದು

ಜನುಮವ ನಾ ಸ್ವೀಕರಿಸಿದಂತೆ
ಮರಣವ ಸ್ವೀಕರಿಸಲು
ಜನುಮ ಮರಣಗಳೆರಡೂ
ಸೇರಿಯೆ ಭವವೆಂದು

ಕಲಿಸು ನನಗೆ ಕಲಿಸು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೩
Next post ಏನ ಬೇಡಲಿ

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…