ವಿರಹ

ಕಾಣಬಾರದೇನೊ ಕಣ್ಣಿಗೆ
ತಾಣವಾವುದೆನ್ನ ಆಸೆಗೆ.
ಕುಕ್ಷಿಗಾಗಿ ಭಿಕ್ಷೆ ಬೇಡದೆ
ರಕ್ಷಣಕ್ಕೆ ಕಯ್ಯ ನೀಡಿದೆ.

ಅಂತರಂಗದಮಲ ಬೆಳಕಿಗೆ
ಅಂತರಾಳವೆಲ್ಲ ಹಸಿದಿದೆ.
ಕಣ್ಣತುಂಬ ಮೋಡ ಮುಸುಕಿದೆ
ಕಣ್ಣಗೊಂಬೆ ಕುಗ್ಗಿ ಕುಸಿದಿದೆ.

ಪ್ರಳಯದಗ್ನಿ ಒಳಗೆ ಅಡಗಿದೆ
ಜ್ವಲನಜ್ವಾಲೆ ಧೂಮವೆದ್ದಿದೆ.
ಪ್ರಳಯವಾಯು ಬೀಸತೊಡಗಿದೆ
ಪ್ರಲಯಜಲಕೆ ಉಕ್ಕು ಬಂದಿದೆ.

ಮಿಣುಕು ಜ್ಯೋತಿ ಆರಲಾರದೆ?
ಜಿಣುಕಿ ಮಿಣುಕಿ ಬಾಳಬಲ್ಲದೆ?
ಕಾಣಬಾರದೇನೊ ಕಣ್ಣಿಗೆ
ತಾಣವಾವುದೆನ್ನ ಆಸೆಗೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದ್ವಂದ್ವ
Next post ಯಾಜ್ಞವಲ್ಕ್ಯನೂ ಮೃತ್ರೇಯಿಯೂ

ಸಣ್ಣ ಕತೆ

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…