ಕಾಸಿನ ಬಿಸಿಗೆ ಕರಗುವ ಮೌಲ್ಯವುಳಿವುದೆಂತು?

ಹಸಿ ಬಿಸಿಯ ಸ್ಥಿತ್ಯಂತರಕೆಂಥ ಕಲ್ಲಾದೊಡಂ
ತುಸು ತುಸು ಒಡೆದಂತಿಮದಿ ಮಣ್ಣಕ್ಕು
ಹುಸಿ ದುಡಿಮೆಯನುದಿನವು ನೂರ್ ಬಾರಿ
ಬಿಸಿ ದುಡ್ಡಪ್ಪಾವರ್ತನೆಯ ವೇಗಕೆಮ್ಮ
ಕೃಷಿ ಬದುಕಿನಾರೋಗ್ಯ ನುಚ್ಚು ನೂರಾಗುತಿದೆ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಂದಿ ಬೆಟ್ಟವ ಕಂಡೆ
Next post ನಾಗಣ್ಣನ ಕನ್ನಡಕ

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…