ದುಡಿವ ರೈತರಿಗ್ಯಾಕಿಂಥ ನಾಯಿ ಪಾಡು?

ದುಡಿದು ಗಳಿಸಿರ್‍ಪನ್ನ ಪಕ್ಕದೊಳಿರ್‍ದು ಬಡತನ
ದೂರದೂರದ ಸೂರೆಯುದ್ಯೋಗಿಗೆಲ್ಲ ಸಿರಿತನ
ದೈನ್ಯವಲಾ ಎಸೆದ ಬಿಸ್ಕತ್ತಿಗೆಳಸುವ ಶ್ವಾನ
ದಂತೆಮ್ಮ ರೈತರ ಪಾಡು ದುಡ್ಡನಾಘ್ರಾಣಿಸುತಿರಲ್
ಧರೆ ಸತ್ತ್ವಗಳಂತೆ ಸೂರೆ ಹೋಗುತಿದೆ ಅಧಿಕ ಇಳುವರಿಗೆ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾಕೆ?
Next post ಸೂರ್‍ಯ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…