ಪ್ರಕೃತಿ ಪರವಾಗದೊಡಿತ್ತ ಅಧ್ಯಾತ್ಮ ತತ್ತ್ವಜ್ಞಾನವೆಂದೊಡಂ
ಸೊಕ್ಕಿನೊಳತ್ತ ವಿಜ್ಞಾನವೆಂದೊಡಂ ಏನು ಪುರುಷಾರ್ಥ?
ಪ್ರಕೃತಿಪರ ಜೀವನಕಿರ್‍ಪುದದೊಂದೆ ಕೃಷಿ ಕ್ಷೇತ್ರ
ಯುಕ್ತದೊಳನ್ನಾರೋಗ್ಯ ಐಶ್ವರ್‍ಯವಾರಾಮ ಇಲ್ಲಿಹುದು
ಎಕ್ಕಸಕ್ಕವಾಗದಂದದೊಳಿಲ್ಲಿ ವಿಜ್ಞಾನವಾಧ್ಯಾತ್ಮ ಬೆರೆಯುವುದು – ವಿಜ್ಞಾನೇಶ್ವರಾ
*****
ಎಕ್ಕಸಕ್ಕ=ಸಿಕ್ಕಾಪಟ್ಟೆ















