ಮನೆಯಲ್ಲಿ
ಬೆಳ್ಳಿಯ ತೊಟ್ಟಿಲು
ಚಿನ್ನದ ಬಟ್ಟಲು
ಬೆಣ್ಣೆ ತುಪ್ಪ ತಿಂದು ಬೆಳೆದ
ಮಕ್ಕಳು ಮರಿ ಮಕ್ಕಳು
ಎಲ್ಲೋ ಕಾಡಲ್ಲಿ ಬೆಳೆದ
ಗೊಬ್ಬರ ನೀರೂ ಉಣಿಸದ
ಬಿದಿರ ಊರುಗೋಲು
ಎದುರಾದರೆ ಏನೋ ದಿಗಿಲು
*****
ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...
ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...