ಬದುಕು

ನಾನು ಕಾಲಿಟ್ಟಲ್ಲಿ-
ಕರುಳು ಕಿಟಾರನೆ ಕಿರುಚಿ ಬೆವರೊಡೆಯುತ್ತದೆ.
ನೆರಳು ನಗುತ್ತದೆ.

ನಾನು ಕೂತಲ್ಲಿ-
ನೆಲ ಕೀವೊಡೆದು ಬಾವು ಬಿರಿಯುತ್ತದೆ;
ನೋವು ಹರಿಯುತ್ತದೆ.

ನಾನು ಮಲಗಿದಲ್ಲಿ-
ಮಂಚ ಮೌನ ಮುರಿದು ಉರಿಯುತ್ತದೆ;
ಕನಸು ಬೂದಿಯಾಗುತ್ತದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post Arthur Miller ನ Death of a Salesman ಆಧುನಿಕತೆಯಲ್ಲಿ ಬದುಕಿನ ದುರಂತ.
Next post ಶೃಂಗಾರ ಕಾವ್ಯ

ಸಣ್ಣ ಕತೆ

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…