ಹಕ್ಕಿನ ಹಾಡು

ಅಕ್ಷರವೆಂದರೆ ಅಕ್ಷರವಲ್ಲ
ಅರಿವಿನ ಗೂಡು
ಚಿಲಿಪಿಲಿ ಎನ್ನುತ ಮೇಲಕೆ ಹಾರುವ
ಹಕ್ಕಿನ ಹಾಡು

ಎದೆಯಲಿ ಅರಳುವ ಸಮತೆಯ ಸಂಕಟ
ಆವರಿಸಿತು ಅರಿವು
ಬಾಳಲಿ ಕೆರಳುವ ಮಣ್ಣಿನ ಮಾತು
ಕಟ್ಟೊಡೆಯಿತು ನೋವು

ಅಕ್ಷರ ಕಲಿಯುತ ಮುರಿಯಲಿ ಮೊದಲು
ಶತಮಾನದ ಸಂಕೋಲೆ
ಅರಿವು ಹಬ್ಬುತ ಮಾತಾಡಲಿ ಮನಸು
ಮೌನದ ಕರೆಯೋಲೆ

ಕಣ್ಣಿನ ತುಂಬ ಮಣ್ಣಿನ ಬೆಳಕು
ಇದು ಓದಿನ ಹಾದಿ
ನಿಗಿನಿಗಿ ಕೆಂಡ ಒಳಗೆ ಉರಿಯಲಿ
ಅಸಮಾನತೆ ಬೂದಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೋಲು ಗೆಲುವು
Next post ಇಂದಿನ ವಿವಾಹ ವಿಚ್ಚೇದನ

ಸಣ್ಣ ಕತೆ

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…