ಬೆಂದಮನೆ

ಬೆಂದಮನೆ ಭಾರತದಲ್ಲಿ
ಕನ್ನಡಿಗಳ ಕೊಂದವರು
ಮುಖಕಾಣದ ಮನೆಯಲ್ಲಿ
ಬೆನ್ನುಡಿಗಳ ಬರೆ ಹಾಕಿ
ಮುನ್ನುಡಿಗಳ ಮಾರಿದರು.

ಅಕ್ಷರಗಳ ಒಡಲಲ್ಲಿ
ಭ್ರೂಣಗಳ ಕೊಂದವರು
ಪುಟಪುಟದ ಸುಳ್ಳಿನಲಿ
ಕಂತೆಗಳ ಕಟ್ಟುತ್ತ
ಜಂತೆಗಳ ಕಿತ್ತರು

ಗೋಡೆಗಳು ಗೋಳಿಡುವಾಗ
ಗೂಡುಗಳು ಗದರಿದವು
ನೆಚ್ಚಿದ ಗುಬ್ಬಚ್ಚಿಗಳು
ಮೋಡಗಳ ಮುಟ್ಟಿದವು
ಮನುಜರಿಗೆ ಹೇಳಿದವು-

ಹೊಗೆ ಹತ್ತಿದ ಹಗೆ ನಾಡಿಗೆ
ಬಂದೇ ಬರುತ್ತೇವೆ ನಾವು
ಮೋಡದ ಒಡಲಿಂದ
ಮಿಡಿಯುವ ಹನಿ ತೆನೆಯ
ತಂದೇ ತರುತೇವೆ ನಾವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಶಸ್ಸು
Next post ಜೀವನವೆಂದರೆ ಬರೀ

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ನೆಮ್ಮದಿ

    ಅವನಿಗೆ ನೆಮ್ಮದಿ ಬೇಕಿತ್ತು. ಆ ಜನನಿಬಿಡ ರಸ್ತೆಯ ಪಕ್ಕದಲ್ಲಿರುವ ನ್ಯೂಸ್ ಪೇಪರ್ ಸ್ಟಾಲಿಗೆ ತಾಗಿ ನಿಂತು ಅವನು ರಸ್ತೆಯನ್ನು ವೀಕ್ಷಿಸುತ್ತಿದ್ದ. ಸೂರ್‍ಯೋದಯವಾಗಿ ಕೆಲವೇ ಗಂಟೆಗಳಾಗಿರಬಹುದು. ಜಾತ್ರೆಗೆ ಸೇರಿದಂತೆ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…