ಎಲ್ಲಿ ಹೋದರೊ ಜನರು?

ಎಲ್ಲಿ ಹೋದರೊ ಜನರು?
‘ಸಾಮರಸ್ಯದ ತವರು’
ಹೇಳುತ್ತ ಬಂದದ್ದು ಹುಸಿಯಾಯಿತೆ?
ಸೇಡೆಂಬುದು ಈ ಭೂಮಿ ಹೆಸರಾಯಿತೆ?

ಚಂದಿರನು ನಕ್ಕಾಗ ಮಂದಿರವು ಮುನಿದಿತ್ತು
ಗುಡಿಸಲಿನ ಗರಿಯಲ್ಲಿ ಹರಿದಾಡಿತೊ-
ಸೇಡು ಸರ್‍ಪವು ಸುತ್ತಿ ಸುಳಿದಾಡಿತೊ!
ಬೆವರೊಡೆದ ಭೂಮಿಯಲಿ ಕರಿ‌ಒಡಲ ಉರಿಹತ್ತಿ
ಕೊಳಲ ಸುಂದರ ನಾದ ಬೂದಿಯಾಯ್ತೊ
ಹೂವ ನುಂಗಿದ ಹಾವು ಹಾದಿಯಾಯ್ತೊ?

ಎಲ್ಲಿ ಹೋದರೊ ಆ ಜನರು
ಭೂತಕಾಲದ ಕಿಂಡಿಯಲಿ ಲೋಕ ಕಂಡವರು
ಎಂದು ಬರುವರೂ ಈ ಜನರು-
ವರ್‍ತಮಾನದ ಉರಿಯಲ್ಲಿ ಮಿಂದು ಎದ್ದವರು
ಬೆಳಕಿನ ಬಟ್ಟೆಗಳ ತೊಟ್ಟು ನಿಂದವರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಡಾ. ವೀಣಾ ಶಾಂತೇಶ್ವರ – ಹೊಸತನದ ಪ್ರತಿಭೆ
Next post ಅನಾಥ ಬಂಧು

ಸಣ್ಣ ಕತೆ

 • ಎರಡು ಪರಿವಾರಗಳು

  ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

 • ಜೀವಂತವಾಗಿ…ಸ್ಮಶಾನದಲ್ಲಿ…

  ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

 • ತನ್ನೊಳಗಣ ಕಿಚ್ಚು

  ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

 • ಕಲಾವಿದ

  "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

 • ಆಪ್ತಮಿತ್ರ

  ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…